ಡಿನೋಟಿಫಿಕೇಷನ್ ಪ್ರಕರಣ : 'BSY' ಅರ್ಜಿ ವಿಚಾರಣೆ ಫೆ.14ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ: ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತನಿಖೆ ರದ್ದುಪಡಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಫೆ. 14ಕ್ಕೆ ಮುಂದೂಡಿದೆ.
2006-07ರ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಮಾಜಿ ಸಿಎಂ ಯಡಿಯೂರಪ್ಪ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಹಿಂದೆ ಬಿಎಸ್ವೈ ಅವರನ್ನು ಬಂಧಿಸದಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು.
ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ಯಡಿಯೂರಪ್ಪ ಅವರು ಕಾನೂನಿಗೆ ವಿರುದ್ಧವಾಗಿ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಎಂಟು ಎಕರೆ ಹತ್ತು ಗುಂಟೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ವಾಸುದೇವ ರೆಡ್ಡಿ ಎಂಬುವರು 2013ರಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಬಳಿಕ ಕೋರ್ಟ್ ಆದೇಶದಂತೆ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು.