ಡೆಲ್ಲಿ ಕ್ಯಾಪಿಟಲ್ಸ್‌ಗೆ ಯಾರು ನಾಯಕ?; ದೊಡ್ಡ ಸುಳಿವು ನೀಡಿದ ರಿಷಭ್ ಪಂತ್!
ಮಾರ್ಚ್ 31ರಿಂದ ಆರಂಭವಾಗಲಿರುವ ಬಹು ನಿರೀಕ್ಷಿತ 16ನೇ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ದಿನಗಣನೆ ಆರಂಭವಾಗಿದ್ದು, ಟಿ20 ಕ್ರಿಕೆಟ್ ಹಬ್ಬ ಆಚರಿಸಲು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಎದುರು ನೋಡುತ್ತಿದ್ದಾರೆ.
10 ತಂಡಗಳು, 12 ಸ್ಥಳಗಳಲ್ಲಿ ಒಟ್ಟು ತಲಾ 14 ಲೀಗ್ ಪಂದ್ಯಗಳನ್ನು ಆಡಲಿವೆ.
ಇದೇ ವೇಳೆ, ಆಸ್ಟ್ರೇಲಿಯಾದ ಅನುಭವಿ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಋತುವಿಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಖಾಯಂ ನಾಯಕ ರಿಷಭ್ ಪಂತ್ ಅನುಪಸ್ಥಿತಿಯು ಡೇವಿಡ್ ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲು ದಾರಿ ಮಾಡಿಕೊಡುತ್ತದೆ. ರಿಷಭ್ ಪಂತ್ ಡಿಸೆಂಬರ್ 2022ರಲ್ಲಿ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ 2023ರ ಐಪಿಎಲ್ ಅನ್ನು ಮಿಸ್ ಮಾಡಿಕೊಳ್ಳಲಿದ್ದಾರೆ.
ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್‌ನಲ್ಲಿ ಡೇವಿಡ್ ವಾರ್ನರ್ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಒಬ್ಬರಾಗಿದ್ದಾರೆ. ಎಡಗೈ ಬ್ಯಾಟರ್ ಆಡಿದ 162 ಐಪಿಎಲ್ ಪಂದ್ಯಗಳಲ್ಲಿ 42.01 ಸರಾಸರಿ ಮತ್ತು 140.69 ಸ್ಟ್ರೈಕ್‌ರೇಟ್‌ನೊಂದಿಗೆ 5881 ರನ್ ಗಳಿಸಿದ್ದಾರೆ.
ಡೇವಿಡ್ ವಾರ್ನರ್ ಈವರೆಗೆ 55 ಐಪಿಎಲ್ ಅರ್ಧಶತಕ ಮತ್ತು 4 ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೇ ಐಪಿಎಲ್ ಫ್ರಾಂಚೈಸಿಯ ನಾಯಕರಾಗಿರುವ ಅನುಭವವನ್ನು ಕೂಡ ಹೊಂದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡವನ್ನು ಮುನ್ನಡೆಸ 2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಫೈನಲ್‌ನಲ್ಲಿ 8 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಮಾಡಿದ್ದರು.
ಇದೀಗ ಇತ್ತೀಚಿನ ಅಪ್‌ಡೇಟ್‌ನಲ್ಲಿ, ರಿಷಭ್ ಪಂತ್ ಅವರು ಡೇವಿಡ್ ವಾರ್ನರ್ ಅವರ ಅಧಿಕೃತ ಇನ್‌ಸ್ಟಾಗ್ರಾಮ್‌ನಲ್ಲಿನ ಪೋಸ್ಟ್‌ನಲ್ಲಿ ಕಾಮೆಂಟ್ ಮಾಡುವ ಮೂಲಕ ಮುಂಬರುವ ಋತುವಿನಲ್ಲಿ ಅನುಭವಿ ಎಡಗೈ ಆಟಗಾರ ದೆಹಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ನಾಯಕತ್ವ ವಹಿಸಿಕೊಳ್ಳುವ ಮತ್ತೊಂದು ಸುಳಿವು ನೀಡಿದ್ದಾರೆ.
ಡೇವಿಡ್ ವಾರ್ನರ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ ಪೋಸ್ಟ್‌ನಲ್ಲಿ ರಿಷಭ್ ಪಂತ್ "ಅಭಿನಂದನೆಗಳು ಬಾಸ್' ಎಂದು ಕಾಮೆಂಟ್ ಮಾಡಿದ್ದಾರೆ. ಈ ಪೋಸ್ಟ್‌ನಲ್ಲಿ ಡೇವಿಡ್ ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ ಜೆರ್ಸಿಯನ್ನು ಧರಿಸಿರುವ ಚಿತ್ರವನ್ನು ಹೊಂದಿದೆ. ನಮ್ಮ ಮೊದಲ ಪಂದ್ಯ ಏಪ್ರಿಲ್ 1ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಇದೆ ಎಂದು ಬರೆದುಕೊಂಡಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2023ರ ಉದ್ಘಾಟನಾ ಹಣಾಹಣಿಯಲ್ಲಿ ಮಾರ್ಚ್ 31ರಂದು ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಏಪ್ರಿಲ್ 1ರಂದು ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡದ ವಿರುದ್ಧ ಸೆಣಸಲಿದೆ.