ಡ್ರಗ್ಸ್ ನಶೆಯಲ್ಲೇ ಶ್ರದ್ಧಾ ಹತ್ಯೆ ಮಾಡಿದೆ: ಅಫ್ತಾಬ್ ತಪ್ಪೊಪ್ಪಿಗೆ
ಶ್ರದ್ಧಾ ಹತ್ಯೆ ಪ್ರಕರಣದಲ್ಲಿ ಸ್ಫೋಟಕ ಮಾಹಿತಿಗಳು ಹೊರ ಬರುತ್ತಿದೆ. ಪ್ರಕರಣ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ಮುಂದೆ ಅಫ್ತಾಬ್ ಹೊಸ ವಿಚಾರಗಳನ್ನ ಹಂಚಿಕೊಳ್ಳುತ್ತಿದ್ದಾನೆ. ತನಿಖೆ ವೇಳೆ ಅಫ್ತಾಬ್ ಡ್ರಗ್ಸ್‌ಗೆ ಅಡಿಕ್ಟ್ ಆಗಿರುವುದಾಗಿ ಒಪ್ಪಿಕೊಂಡಿದ್ದಾನೆ. ನಿತ್ಯ ಗಾಂಜಾ ಸೇವಿಸುತ್ತಿದ್ದೆ. ಇದನ್ನು ಶ್ರದ್ಧಾ ವಿರೋಧಿಸಿದ್ದಳು. ಇದು ನಶೆಯಲ್ಲಿ ನಡೆದ ಘಟನೆ, ಶ್ರದ್ಧಾ ಹತ್ಯೆ ಮಾಡುವ ಉದ್ದೇಶ ಇರಲಿಲ್ಲ ಎಂದು ಅಫ್ತಾಬ್ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸ್ ಮೂಲ ತಿಳಿಸಿದೆ.