ಡ್ರಗ್ಸ್ ಸೇವನೆ ಆರೋಪ; NCB ಅಧಿಕಾರಿಗಳಿಂದ 3 ಯುವತಿಯರು ವಶಕ್ಕೆ

ಬೆಂಗಳೂರು: ಯುವತಿಯರು ಡ್ರಗ್ಸ್ ಸೇವನೆ ಸಂಬಂಧ ಮಾಹಿತಿ ಪಡೆದ ಹಿನ್ನೆಲೆಯಲ್ಲಿ ಎನ್‌ಸಿಬಿ (NCB) ಅಧಿಕಾರಿಗಳು ತಡರಾತ್ರಿ ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿರುವ NCB ಅಧಿಕಾರಿಗಳು ಮಡಿವಾಳ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್‌ನ ಫ್ಲಾಟ್ ಮೇಲೆ ಬುಧವಾರ ರಾತ್ರಿ ದಾಳಿ ನಡೆಸಿದರು. ಈ ವೇಳೆ ಉತ್ತರ ಭಾರತ ಮೂಲದ ಮೂವರು ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.