ಡ್ರಾಪ್ ಕೊಡುವ ನೆಪದಲ್ಲಿ ರೇಪ್; ಆರೋಪಿ ಅರೆಸ್ಟ್

ಡ್ರಾಪ್ ಕೊಡುವ ನೆಪದಲ್ಲಿ ರೇಪ್; ಆರೋಪಿ ಅರೆಸ್ಟ್

ಬಾರ್ ಒಂದರಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದುಕೊಂಡು ಹೋದ ವ್ಯಕ್ತಿಯೊಬ್ಬ ಆಕೆಯ ಮೇಲೆ ಅತ್ಯಾಚಾರವೆಸಗಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.‌

ಕೊಡಗು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ಸಂಜೆ ಮಹಿಳೆ ಕೆಲಸ ಮುಗಿಸಿಕೊಂಡು ತಮ್ಮ ಊರಿಗೆ ತೆರಳಲು ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಮಾರುತಿ ಒಮಿನಿಯಲ್ಲಿ ಬಂದ ಮಣಿಕಂಠ ಎಂಬಾತ ಡ್ರಾಪ್ ಕೊಡುವುದಾಗಿ ಕರೆದಿದ್ದಾನೆ.

ಬಳಿಕ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದು, ಪೊಲೀಸರಿಗೆ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಮಹಿಳೆ ಮೊಬೈಲ್ ನಂಬರ್ ಪಡೆದು ನಾನು ಕರೆದಾಗ ಬರಬೇಕು ಎಂದು ತಾಕೀತು ಕೂಡ ಮಾಡಿದ್ದ ಎನ್ನಲಾಗಿದೆ.

ಈ ಘಟನೆಯಿಂದ ತೀವ್ರ ಆಘಾತಕ್ಕೆ ಒಳಗಾಗಿದ್ದ ಮಹಿಳೆ ಮೂರು ದಿನಗಳ ಕಾಲ ಕೆಲಸಕ್ಕೆ ಗೈರು ಹಾಜರಾಗಿದ್ದು, ಗುರುವಾರದಂದು ಬಾರ್ ಮಾಲೀಕರಿಗೆ ವಿಷಯ ತಿಳಿಸಿದ ಬಳಿಕ ಅವರ ಸಲಹೆಯಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಆರೋಪಿ ಮಣಿಕಂಠನನ್ನು ಬಂಧಿಸಲಾಗಿದೆ.