ತನ್ನ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಕ್ಕೆ ಕೋಪಗೊಂಡು ಮಹಿಳೆ 'ಮೂಗು' ಕತ್ತರಿಸಿದ ವ್ಯಕ್ತಿ
ಶಹಜಹಾನ್ಪುರ (ಉತ್ತರಪ್ರದೇಶ): ಉತ್ತರಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ತನ್ನವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿಕ್ಕೆ ನಂತರ ಸೇಡು ತೀರಿಸಿಕೊಳ್ಳಲು ಪುರುಷ ಮಹಿಳೆಯ ಮೂಗನ್ನು ಕತ್ತರಿಸಿದ್ದಾನೆ.
ಪ್ರದೇಶದ ಶಹಜಹಾನ್ಪುರದ ಹಳ್ಳಿಯಲ್ಲಿ ಘಟನೆ ನಡೆದಿದ್ದು,ತನ್ನ ವಿರುದ್ಧ ಕಿರುಕುಳ ದೂರು ದಾಖಲಿಸಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು ಮಹಿಳೆ ಮೇಲೆ ಹಲ್ಲೆ ನಡೆಸಿದ್ದು, ಬಳಿಕ ಮಹಿಳೆಯ ಮೂಗನ್ನು ಕುಡುಗೋಲಿನಿಂದ ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿದಿದ್ದಾರೆ.
ದಾಳಿಯ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ಸಂತ್ರಸ್ತೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ರಾಜೇಶ್ ಕುಮಾರ್ ವಿರುದ್ಧ ಮೂರು ವರ್ಷಗಳ ಹಿಂದೆ ಆಕೆಯ ಗ್ರಾಮದ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಸಂಜೀವ್ ಬಾಜಪೇಯ್ ಪಿಟಿಐಗೆ ತಿಳಿಸಿದ್ದಾರೆ