ತಮಿಳು ಚಿತ್ರದಲ್ಲಿ ಅನುಷ್ಕಾ ಶೆಟ್ಟಿ

ದಕ್ಷಿಣ ಭಾರತದ ಜನಪ್ರಿಯ ನಾಯಕಿಯರಲ್ಲಿ ಒಬ್ಬರಾದ ಕನ್ನಡತಿ ಅನುಷ್ಕಾ ಶೆಟ್ಟಿ ಬ್ರೇಕ್ ನಂತರ ಒಂದರ ಹಿಂದೆ ಒಂದರಂತೆ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಸದ್ಯ ತೆಲುಗಿನಲ್ಲಿ ನವೀನ್ ಪೊಲಿಶೆಟ್ಟಿ ಅಭಿನಯದ ಚಿತ್ರದಲ್ಲಿ ನಟಿಸುತ್ತಿರುವ 'ಸ್ವೀಟಿ' ತಮಿಳು ಚಿತ್ರಕ್ಕೆ ಸಹಿ ಹಾಕಿದ್ದಾರೆ. ಎ.ಎಲ್.ವಿಜಯ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ಅನುಷ್ಕಾ ನಟಿಸುವುದು ಪಕ್ಕಾ ಆಗಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್ ನಲ್ಲಿ 'ದೈವ ತಿರುಮಗಳ್' ಮತ್ತು 'ತಾಂಡವಂ' ಚಿತ್ರ ತೆರೆಗೆ ಬಂದಿತ್ತು.