ತಮಿಳುನಾಡಿನಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರಿದ್ದ ವಾಹನದ ಮೇಲೆ ಕಲ್ಲು ತೂರಾಟ !
ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಶಬರಿಮಲೆ ಪ್ರವಾಸಕ್ಕೆ ತೆರಳಿ ವಾಪಾಸ್ಸಾಗುತ್ತಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಭಕ್ತರಿದ್ದ ವಾಹನದ ಮೇಲೆ ತಮಿಳುನಾಡಿನ ಮಧುರೈನಲ್ಲಿ ಕಲ್ಲು ತೂರಾಟ ನಡೆದಿದೆ. ಅಯ್ಯಪ್ಪಸ್ಚಾಮಿ ದರ್ಶನ ಮುಗಿಸಿ ಮಧುರೆ ದೇವಾಲಯಕ್ಕೆ ಆಗಮಿಸಿದ್ದ ಕನ್ನಡಿಗರು ಟಿಟಿ ವಾಹನದ ಮೇಲೆ ಕನ್ನಡ ಧ್ವಜ ಕಟ್ಟಿದ್ದಕ್ಕೆ ಕಿಡಿಗೇಡಿಗಳು ಕಿರಿಕ್ ಮಾಡಿದ್ದಾರೆ. ನಮಗೆ ರಕ್ಷಣೆ ಕೊಡಿ ಎಂದು ಕನ್ನಡಿಗರು ಮನವಿ ಮಾಡಿಕೊಂಡಿದ್ದಾರೆ.