ತಮಿಳುನಾಡಿನಲ್ಲಿ ನ. 16 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತಮಿಳುನಾಡಿನಲ್ಲಿ ನ. 16 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಿಳುನಾಡು: ತಮಿಳುನಾಡಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಲೇ ಇದೆ. ನವೆಂಬರ್ 16 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ ತಮಿಳುನಾಡಿನ ತಿರುವಳ್ಳೂರು, ರಾಣಿಪೇಟ್ ಮತ್ತು ಕಾಂಚೀಪುರಂ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.

ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ನೈಋತ್ಯ ಬಂಗಾಳ ಕೊಲ್ಲಿ ಮತ್ತು ಈಶಾನ್ಯ ಶ್ರೀಲಂಕಾದ ಪಕ್ಕದ ಪ್ರದೇಶಗಳಲ್ಲಿ ಉತ್ತಮವಾಗಿ ಗುರುತಿಸಲ್ಪಟ್ಟಿರುವ ಕಡಿಮೆ ಒತ್ತಡದ ಪ್ರದೇಶವು ಶನಿವಾರ ಬೆಳಗಿನವರೆಗೆ ವಾಯುವ್ಯವಾಗಿ ತಮಿಳುನಾಡು ಮತ್ತು ಪುದುಚೇರಿ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ. ಇದು ಶನಿವಾರ ಮತ್ತು ಭಾನುವಾರ ತಮಿಳುನಾಡು ಮತ್ತು ಕೇರಳದಾದ್ಯಂತ ಚಲಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.