ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಟೀಮ್ ಇಂಡಿಯಾದ ಅತ್ಯುತ್ತಮ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧ ನಡೆಯಲಿರುವ ಏಕದಿನ ಹಾಗೂ ಟಿ ಟ್ವೆಂಟಿ ಸರಣಿಗೆ ಸಜ್ಜಾಗುತ್ತಿದ್ದಾರೆ ಹಾರ್ದಿಕ್ ಪಾಂಡ್ಯ ತಮ್ಮ ವರ್ಕೌಟ್ ನ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಕಮೆಂಟ್ಸ್ ಗಳು ಬಂದಿವೆ.
ಜುಲೈ 18ರಿಂದ ಏಕದಿನ ಸರಣಿ ಆರಂಭವಾಗುತ್ತಿದ್ದು, ಜಿಮ್ ನಲ್ಲಿ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ. ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ಆಗಿ ಮಿಂಚುತ್ತಿರುವ ಹಾರ್ದಿಕ್ ಪಾಂಡ್ಯ ಅವರಿಗೆ ಇನ್ ಸ್ಟಾಗ್ರಾಂನಲ್ಲಿ 18 ಮಿಲಿಯನ್ ಗೂ ಅಧಿಕ ಅನುಯಾಯಿಗಳಿದ್ದಾರೆ. ತಮ್ಮ ಪ್ರತಿಯೊಂದು ನಡೆಯನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
View this post on Instagram