ತರಕಾರಿ ಮಾರುವರ ಮೇಲೆ ಆಟಾಟೋಪ: ಪಿಎಸ್‌ಐ ಅಮಾನತು
ರಾಯಚೂರು: ನಗರದ ರಸ್ತೆ ಪಕ್ಕದಲ್ಲಿ ಭಾನುವಾರ ತರಕಾರಿ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಧಾವಿಸಿ, ಕಾಲಿನಿಂದ ತರಕಾರಿಗಳನ್ನು ಚೆಲ್ಲಾಪಿಲ್ಲಿಗೊಳಿಸಿ ಅಸಭ್ಯವಾಗಿ ವರ್ತಿಸಿದ ಸದರ್ ಬಜಾರ್ ಠಾಣೆಯ ಪಿಎಸ್‌ಐ ಆಜಮ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಅವರು ಸೇವೆಯಿಂದ ಅಮಾನತು ಮಾಡಿದ್ದಾರೆ.
ವಾರಾಂತ್ಯ ಲಾಕ್ ಡೌನ್ ಜಾರಿ ಇದ್ದರೂ ನಗರದ ಚಂದ್ರಮೌಳೇಶ್ವರ ವೃತ್ತದಲ್ಲಿ ಕೆಲವು ಗ್ರಾಮೀಣ ಭಾಗದ ತರಕಾರಿ ವ್ಯಾಪಾರಿಗಳು ಕುಳಿತುಕೊಂಡಿದ್ದರು.
ಪೊಲೀಸ್ ವಾಹನದಲ್ಲಿ ಸ್ಥಳಕ್ಕೆ ಆಗಮಿಸಿದ ಪಿಎಸ್‌ಐ ಅವರು ಕೊತ್ತಂಬರಿ ಸೊಪ್ಪು, ನಿಂಬೆಹಣ್ಣು ಹಾಗೂ ಟೊಮೆಟೊ ಹಾಗೂ ಇತರೆ ಸೊಪ್ಪಿನ ತರಕಾರಿಗಳನ್ನು ಕಾಲಿನಿಂದ ಒದೆಯುತ್ತಿರುವ ವಿಡಿಯೋ ತುಣುಕುಗಳು ವೈರಲ್ ಆಗಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ರಮ ಕೈಗೊಂಡಿದ್ದಾರೆ.