ಮಂಡ್ಯದ ಕೆ.ಆರ್.ಪೇಟೆಯಲ್ಲಿ 28.50 ಕೋಟಿ ವೆಚ್ಚದ ತಾಯಿ ಮಕ್ಕಳ ಆಸ್ಪತ್ರೆಗೆ ಶಂಕುಸ್ಥಾಪನೆ

ಮಂಡ್ಯ: ಕೆಆರ್ ಪೇಟೆಯಲ್ಲಿ 28.50 ಕೋಟಿ ವೆಚ್ಚದಲ್ಲಿ 50 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆಲಾ ಸಚಿವ ಡಾ.ನಾರಾಯಣಗೌಡ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಕೃಷ್ಣರಾಜಪೇಟೆ ತಾಲೂಕಿನ ಜನರ ಬಹುದಿನದ ಬೇಡಿಕೆ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಇಂದು ಗುದ್ದಲಿ ಪೂಜೆ ನೆರವೇರಿಸಲಾಗಿದೆ.
ಕೆಆರ್ ಪೇಟೆ ಕ್ಷೇತ್ರದ ಜನರ ಬಹು ಬೇಡಿಕೆಯಂತೆ 28.50 ಕೋಟಿ ವೆಚ್ಚದಲ್ಲಿ 50 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಇಂದು ಗುದ್ದಲಿ ಪೂಜೆ ನೆರವೇರಿಸಲಾಗಿದೆ. ತ್ವರಿತಗತಿಯಲ್ಲಿ ಆಸ್ಪತ್ರೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ, ತಾಯಿ ಮಕ್ಕಳ ಚಿಕಿತ್ಸೆಗೆ ಮುಕ್ತಗೊಳಿಸಲಾಗುತ್ತದೆ ಎಂದು ಸಚಿವ ಡಾ. ನಾರಾಯಣಗೌಡ ಅವರು ತಿಳಿಸಿದ್ದಾರೆ.
ಕೆಆರ್ ಪೇಟೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಅಗತ್ಯವಿತ್ತು. ಕೆಆರ್ ಪೇಟೆ ತಾಲೂಕು ಆಸ್ಪತ್ರೆಯಲ್ಲಿ ಪ್ರತಿವರ್ಷ ಸುಮಾರು 500 ಕ್ಕೂ ಹೆಚ್ಚು ಹೆರಿಗೆಗಳಾಗುತ್ತಿದ್ದರಿಂದ ಹಲವು ಸಲ ಮಂಡ್ಯ, ಮೈಸೂರು, ಹಾಸನಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿರುವುದನ್ನು ಮನಗಂಡಿದ್ದ ಸಚಿವ ಡಾ.ನಾರಾಯಣಗೌಡ ಅವರು, ಉಪ ಚುನಾವಣೆ ಸಂದರ್ಭದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತಾಯಿ ಮಕ್ಕಳ ಆಸ್ಪತ್ರೆಗೆ ಒಪ್ಪಿಗೆ ಪಡೆದಿದ್ದರು. ಆಸ್ಪತ್ರೆಗೆ 28.50 ಕೋಟಿ ಅನುದಾನ ಪಡೆದಿದ್ದರು.