ತಾರಕ್ಕೇರಿದ ಗಡಿ ವಿವಾದ: ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿ ಕೆಟ್ಟೆಚ್ಚರಕ್ಕೆ ಪೊಲೀಸರಿಗೆ ಗೃಹ ಸಚಿವರ ಸೂಚನೆ

ತಾರಕ್ಕೇರಿದ ಗಡಿ ವಿವಾದ: ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿ ಕೆಟ್ಟೆಚ್ಚರಕ್ಕೆ ಪೊಲೀಸರಿಗೆ ಗೃಹ ಸಚಿವರ ಸೂಚನೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಕೆಲ ಗ್ರಾಮಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬುದಾಗಿ ಮಹಾ ಸರ್ಕಾರ ಕ್ಯಾತೆ ತೆಗೆಯಲಾಗಿದೆ. ಅಲ್ಲದೇ ಕೆ ಎಸ್ ಆರ್ ಟಿ ಸಿ ಬಸ್ ಗಳಿಗೆ ಕಪ್ಪು ಮಸಿ ಬಳಿದಿರೋದಲ್ಲದೇ, ಕಲ್ಲು ತೂರಾಟವನ್ನು ನಡೆಸಿ, ಶಿವಸೇನೆಯ ಕಾರ್ಯಕರ್ತರು ಪಂಡಾಟ ಮೆರೆದಿದ್ದಾರೆ.

ಈ ಹಿನ್ನಲೆಯಲ್ಲಿ ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ

ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿರುವಂತ ಅವರು, ದೂರವಾಣಿ ಮೂಲಕ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಕೈಗೊಂಡಿರುವಂತ ಪೊಲೀಸ್ ಬಂದೋಬಸ್ಥ್ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ.

ಇನ್ನೂ ಯಾವುದೇ ಕಾರಣಕ್ಕೂ ಶಾಂತಿ ಕದಡುವಂತ ಕೆಲಸ ಆಗಬಾರದು. ಶಾಂತಿ ಕಾಪಾಡಲು ಸೂಕ್ತ ಕ್ರಮಗಳನ್ನು, ಮುನ್ನೆಚ್ಚರಿಕೆಯನ್ನು ಕೈಗೊಳ್ಳುವಂತೆಯೂ ಪೊಲೀಸರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚಿಸಿದ್ದಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ತಾರಕಕ್ಕೇರಿದ ಬೆನ್ನಲ್ಲೇ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಶೀಘ್ರವೇ ಎರಡೂ ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿ, ಚರ್ಚಿಸಲಿದ್ದಾರೆ ಎನ್ನಲಾಗುತ್ತಿದೆ.