ತಮಿಳುನಾಡಿ(Tamilnadu)ನಲ್ಲಿ ಅಬ್ಬರಿಸಿ ಬೊಬ್ಬರಿದಿದ್ದ ಮಳೆ(Rain) ಈಗ ಕರ್ನಾಟಕ(Karnataka), ಆಂಧ್ರ ಪ್ರದೇಶ(Andhra Pradesh)ದಲ್ಲಿ ತನ್ನ ರುದ್ರನರ್ತನವನ್ನು ತೋರುತ್ತಿದೆ. ಅದರಲ್ಲೂ ತಿರುಪತಿ(Tirupati)ಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹ(Flood)ದ ಸ್ಥಿತಿ ಉಂಟಾಗಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತಿರುಪತಿ ತಿಮ್ಮಪ್ಪನಿಗೂ(Tirupati Timmappa) ಸಂಕಷ್ಟ ತಂದಿಟ್ಟಿದೆ. ಬುಧವಾರ ರಾತ್ರಿಯಿಂದ ತಿರುಮಲ(Tirumala) ಮತ್ತು ತಿರುಪತಿಯಲ್ಲಿ ಭಾರೀ(Rain) ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ(Flood) ಪರಿಸ್ಥಿತಿ ಸೃಷ್ಟಿಯಾಗಿದೆ. ತಿರುಪತಿಯ ಹಲವು ತಗ್ಗುಪ್ರದೇಶ ಮತ್ತು ಜನವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿದ್ದು ಪ್ರವಾಹ ಕಾಣಿಸಿಕೊಂಡಿದೆ. ಎಲ್ಲಿ ನೋಡಿದರು ನೀರು ತುಂಬಿ ಹೋಗಿದೆ. ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹಕ್ಕೆ ಸಿಕ್ಕಿ ವಾಹನಗಳು(Vehicle) ಕೊಚ್ಚಿ ಹೋಗುತ್ತಿರುವ ವಿಡಿಯೋಗಳು ವೈರಲ್(Viral) ಆಗಿವೆ. ಇನ್ನು ತಿರುಮಲ ಬೆಟ್ಟಕ್ಕೆ ಹತ್ತುವ ರಸ್ತೆ ಮಾರ್ಗದಲ್ಲಿ ಹಲವೆಡೆ ಭೂಕುಸಿತ(Landslide) ಉಂಟಾಗಿದ್ದು, ಮರಗಳು ಧರೆಗುರುಳಿವೆ.
ರಣ ಮಳೆಗೆ ಎಲ್ಲವೂ ಮುಳುಗಿಹೋಯ್ತು!
ಇನ್ನು ತಿರುಮಲ ಬೆಟ್ಟದ ಬುಡದಲ್ಲಿರುವ ಕಪಿಲೇಶ್ವರ ಸ್ವಾಮಿ ದೇಗುಲದ ಬಳಿ ಬೆಟ್ಟದ ಮೇಲಿನಿಂದ ಮಳೆ ನೀರು ಜಲಪಾತದ ರೀತಿಯಲ್ಲಿ ಧುಮ್ಮಿಕ್ಕುತ್ತಿರುವ ದೃಶ್ಯಗಳು ಮೈ ಜುಮ್ಮೆನಿಸುತ್ತಿವೆ. ನಗರದ ಹೊರವಲಯದಲ್ಲಿ ಹರಿಯುವ ಸ್ವರ್ಣಮುಖಿ ನದಿಯಲ್ಲಿ ನೀರಿನ ಮಟ್ಟಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಅಕ್ಕಪಕ್ಕದ ಹಳ್ಳಿಗಳ ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಪರಿಣಾಮ ಹಲವು ಹಳ್ಳಿಗಳಲ್ಲಿ ಸೊಂಟದ ಮಟ್ಟದವರೆಗೂ ನೀರು ತುಂಬಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಇನ್ನೂ ಮನೆಗಳಿಗೆ ನೀರು ನುಗ್ಗಿದ್ದು, ಎಲ್ಲ ಸಾಮಾಗ್ರಿಗಳು ನೀರಿನಲ್ಲಿ ಕೊಚ್ಚಿ ಹೋಗಿದೆ.