ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ : ಬಾಗಲಕೋಟೆ -ವಿಜಯಪುರದಲ್ಲಿ ಹೆದ್ದಾರಿ ಬಂದ್

ಬಾಗಲಕೋಟೆ : ಕಬ್ಬಿನ ಬೆಳೆಗೆ ಸರಿಯಾದ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.
ಬಾಗಲಕೋಟೆ ಮತ್ತು ವಿಜಯಪುರದಲ್ಲಿ ಗುರುವಾರ ಹೆದ್ದಾರಿ ಬಂದ್ ಮಾಡಿ ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.