ತುಂಗಾತೀರದ ಬೆನ್ನಲ್ಲೇ ಚಾರ್ಮಾಡಿ ಅರಣ್ಯದಂಚಿನಲ್ಲೂ ಉಗ್ರರಿಂದ `ಟ್ರಯಲ್ ಬಾಂಬ್' ಸ್ಪೋಟ?

ತುಂಗಾತೀರದ ಬೆನ್ನಲ್ಲೇ ಚಾರ್ಮಾಡಿ ಅರಣ್ಯದಂಚಿನಲ್ಲೂ ಉಗ್ರರಿಂದ `ಟ್ರಯಲ್ ಬಾಂಬ್' ಸ್ಪೋಟ?

ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದ ಬೆನ್ನಲ್ಲೇ ಇದೀಗ ಚಾರ್ಮಾಡಿ ಅರಣ್ಯದಂಚಿನಲ್ಲೂ ಟ್ರಯಲ್ ಬಾಂಬ್ ಸ್ಪೋಟ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಂದ್ರಾಳ ಅರಣ್ಯ ಪ್ರದೇಶದಲ್ಲಿ ಕಳೆದ 7-8 ದಿನಗಳ ಹಿಂದೆ ಟ್ರಯಲ್ ಬಾಂಬ್ ಸ್ಪೋಟ ಸಂಭವಿಸಿದೆ ಎಂದು ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಯಾಟಲೈಟ್ ಕರೆ ಕುರಿತು ತನಿಖೆ ನಡೆಸಲು ಹೋಗಿದ್ದ ಪೊಲೀಸರಿಗೆ ಇದೀಗ ಮತ್ತೊಂದು ಸ್ಪೋಟಕ ಮಾಹಿತಿ ಸಿಕ್ಕಿದ್ದು, ಬೆಂದ್ರಾಳ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬಾಂಬ್ ಸ್ಪೋಟ ನಡೆಸಲಾಗಿದೆ. 7-8 ದಿನಗಳ ಹಿಂದೆ ರಾತ್ರಿ 11 ಗಂಟೆ ಸುಮಾರಿಗೆ ಭಾರೀ ಸ್ಪೋಟ ಸಂಭವಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಬಳಿಕ ಇದು ಟ್ರಯಲ್ ಬಾಂಬ್ ಸ್ಪೋಟ ಇರಬಹುದು ಎಂದು ಪೊಲೀಸರಿಗೆ ಸ್ಥಳೀಯ ನಿವಾಸಿಗಳು ದೂರು ನೀಡಿದ್ದಾರೆ.