ತುಮಕೂರಿನಲ್ಲಿ ಎನ್‌ಎಚ್-544ಇ ಅಗಲೀಕರಣಕ್ಕೆ ಕೇಂದ್ರ ಸರ್ಕಾರ ಅನುಮತಿ
ನವದೆಹಲಿ: ತುಮಕೂರು ಜಿಲ್ಲೆಯ ಶಿರಾ ವಲಯದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 544ಇ ಅಗಲೀಕರಣಕ್ಕೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ & ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 166.58 ಕೋಟಿ ವೆಚ್ಚದಲ್ಲಿ ಈ ಹೆದ್ದಾರಿಯನ್ನು ಎರಡು ಲೇನ್‌ಗಳಿಗೆ ವಿಸ್ತರಿಸಲಾಗುತ್ತದೆ. ಇದರಿಂದ ಕರ್ನಾಟಕ & ಆಂಧ್ರಪ್ರದೇಶ ನಡುವಣ ಅಂತರ ರಾಜ್ಯ ಸಂಪಕ್ಷ ಇನ್ನಷ್ಟು ಸುಧಾರಣೆಯಾಗಲಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.