ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; ಬೈಕ್‌ ಗಳ ನಡುವೆ ಡಿಕ್ಕಿ, ಇಬ್ಬರ ದುರ್ಮರಣ

ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; ಬೈಕ್‌ ಗಳ ನಡುವೆ ಡಿಕ್ಕಿ, ಇಬ್ಬರ ದುರ್ಮರಣ

ತುಮಕೂರು: ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್‌ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ತುಮಕೂರಿನ ಗುಬ್ಬಿ ತಾಲೂಕಿನ ಚೇಳೂರು-ಬಿದರೆ ರಸ್ತೆಯ ಸಾಲುಮರದ ತಿಮ್ಮಕ್ಕ ಉದ್ಯಾನವನ ಬಳಿ ಘಟನೆ ಸಂಭವಿಸಿದೆ.

ಚೆಲುವರಾಜು, ಅಭಿಷೇಕ್‌ ಮೃತ ದುರ್ದೈವಿಗಳು. ಈ ಅಪಘಾತದಲ್ಲಿ ಇಬ್ಬರಿಗೂ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೊಗುತ್ತಿದ್ದ ವೇಳೆ ಮಾರ್ಗ ಮಧ್ಯೆ ಸಾವ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಎರಡೂ ಮೃತ ದೇಹವನ್ನು ಗುಬ್ಬಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.