ತುಮಕೂರಿನಲ್ಲಿ ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರಿನಲ್ಲಿ ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು : ತುಮಕೂರಿನಲ್ಲಿ ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಬಾಣಗೆರೆಯಲ್ಲಿ ನಡೆದಿದೆ.

ಮೃತರನ್ನು ಚಿಕ್ಕ ಹುಲಿಕುಂಟೆಯ ಅನಿಲ್ ಹಾಗೂ ಆಂದ್ರದ ಶ್ರೀಧರ್ ಎಂದು ಗುರುತಿಸಲಾಗಿದೆ.

ಇಬ್ಬರು ಬೈಕ್ ನಲ್ಲಿ ಸೌತೆಕಾಯಿ ವ್ಯಾಪಾರಕ್ಕೆ ತೆರಳುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.

ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.