ತುಮಕೂರು:ಮದುವೆಗೆ ಹೊರಟಿದ್ದ ದಂಪತಿ ಭೀಕರ ರಸ್ತೆ ಅಪಘಾತದಲ್ಲಿ ಸಾವು

ತುಮಕೂರು: ಬಳ್ಳಾರಿಗೆ ಮದುವೆಗೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಕಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ದಂಪತಿಗಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗೇಟ್ ಬಳಿ ನಡೆದಿದೆ.
ಹಾಸನ ಜಿಲ್ಲೆ ಅರಸೀಕೆರೆ ಮೂಲದ ರಘು ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಡನಹಳ್ಳಿ ಗ್ರಾಮದ ಅನುಷಾ ಎಂಬಾಕೆಯ ಜತೆಗೆ ಕಳೆದೆ ಒಂದೂವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ. ದು ಸಂಬಂಧಿಕರೊಬ್ಬರ ಮದುವೆಗೆ ಬಳ್ಳಾರಿಗೆ ಮದುವೆಗೆ ತೆರಳುತ್ತಿದ್ದ ವೇಳೆ ಈ ಅವಘಡ ನಡೆದಿದೆ.