ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಇಡೀ ಪತ್ರಕರ್ತರನ್ನು ಜೈಲಿಗಟ್ಟಿದ ಕಳಂಕ ಕಾಂಗ್ರೆಸ್ ಗಿದೆ: ಸಚಿವ ಆರ್ ಅಶೋಕ್
ಬೆಂಗಳೂರು: ದೇಶದಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಇಡೀ ಪತ್ರಕರ್ತರನ್ನು ಜೈಲಿಗಟ್ಟಿದ ಕಳಂಕ ಕಾಂಗ್ರೆಸ್ಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಆರೋಪಿಸಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,ಪತ್ರಕರ್ತರನ್ನು ಗುರಿಯಾಗಿಟ್ಟುಕೊಂಡು ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಬೆದರಿಕೆ ಹಾಕುತ್ತಿದೆ.
ಪತ್ರಕರ್ತರ ಆತ್ಮವಿಶ್ವಾಸ ಕುಗ್ಗಿಸುವ ಕೆಲಸ ನಡೆಯುತ್ತಿದೆ. ಗಿಫ್ಟ್ ಹೆಸರಲ್ಲಿ ಕಾಂಗ್ರೆಸ್ ಬ್ಲಾಕ್ ಮೇಲ್ ಮಾಡುತ್ತಿದೆ ಎಂದು ಆರೋಪಿ ಸಿದರು. ಪತ್ರಕರ್ತರಲ್ಲೂ ಕೂಡ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಬೇಧ ಭಾವದ ಒಡಕು ಮಾಡಿದ್ದಾರೆ. ಲಿಂಗಾಯುತ -ವೀರಶೈವ ಬೇರ್ಪಡಿಸೋಕೆ ಹೋದಂತೆ ಪತ್ರಕರ್ತರನ್ನು ಜಾತಿ, ಧರ್ಮಾಧಾರಿತವಾಗಿ ಬೇರೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಈ ಅಂಟು ಬಂದುಬಿಟ್ಟಿದೆ. ಒಡೆದು ಆಳುವ ನೀತಿಯನ್ನು ಇವತ್ತು ಸಮಾಜದ ನಾಲ್ಕನೇ ಅಂಗ ಪತ್ರಿಕಾರಂಗದ ಮೇಲೆ ಮಾಡುತ್ತಿದ್ದಾರೆ ಎಂದು ಅಶೋಕ್ ಕಿಡಿಕಾರಿದ್ದಾರೆ.