ತುಸು ಹೆಚ್ಚಾದ ಚಿನ್ನದ ದರ

ತುಸು ಹೆಚ್ಚಾದ ಚಿನ್ನದ ದರ

ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ ಇಂದು ತುಸು ಹೆಚ್ಚಾಗಿದೆ. ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 300 ರೂ. ಹೆಚ್ಚಾಗಿ 51,600 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ 330 ರೂ. ಏರಿಕೆಯಾಗಿ 56,290 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ ಬದಲಾಗಿಲ್ಲ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ 51,650 ರೂ. ಇದೆ.