ತೆರಿಗೆ ವಂಚನೆ ಪ್ರಕರಣದಲ್ಲಿ ಟ್ರಂಪ್ ಕುಟುಂಬದ ಸಂಸ್ಥೆಗೆ ದಂಡ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುಟುಂಬದ ಒಡೆತನದಲ್ಲಿರುವ ಸಂಸ್ಥೆಗಳು ತೆರಿಗೆ ಕಟ್ಟದೆ ವಂಚಿಸಿದ ಆರೋಪದಡಿ ಕೋರ್ಟ್ ದಂಡ ವಿಧಿಸಿದೆ. ಟ್ರಂಪ್ ಆರ್ಗನೈಸೆಷನ್ ಮತ್ತು ಟ್ರಂಪ್ ಪೇರೋಲ್ ಕಾರ್ಪ್‍ಗಳು ತೆರಿಗೆ ವಂಚಿಸಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಆ ಬಳಿಕ ಕೋರ್ಟ್‍ನಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಕೋರ್ಟ್‍ನಲ್ಲಿ ಟ್ರಂಪ್ ಕುಟುಂಬದ ಸಂಸ್ಥೆಗಳು ತೆರಿಗೆ ವಂಚನೆ ಮಾಡಿರುವುದು ಸಾಬೀತಾಗಿದೆ.