ತೈಲ ಬೆಲೆ ಏರಿಕೆ ಖಂಡಿಸಿ ಆಟೋ ಚಾಲಕರಿಂದ ಪ್ರತಿಭಟನೆ

ಹುಬ್ಬಳ್ಳಿ: ತೈಲ ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿಯ ತಹಶಿಲ್ದಾರ ಕಚೇರಿ ಎದುರು ಆಟೋ ಚಾಲಕರು ಪ್ರತಿಭಟನೆ ನಡೆಸಿದರು.
ತೈಲ ಬೆಲೆ ಏರಿಕೆ ವಿರುದ್ಧ ಆಕ್ರೋಶಗೊಂಡಿರುವ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಡಿಸೇಲ್, ಪೆಟ್ರೋಲ್, ಎಲ್.ಪಿ.ಜಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಏಕಾಏಕಿ ಇಂಧನ ದರ ಹೆಚ್ಚಳ ಮಾಡಿದ್ದು ನುಂಗಲಾರದ ತುತ್ತಾಗಿದೆ. ಇದರಿಂದ ಆಟೋ ಚಾಲಕರ ಜೀವನದ ಮೇಲೆ ಬರೆ ಎಳೆದಂತಾಗಿದದ್ದು,ಜೀವನ ನಡೆಸುವುದು ದುಸ್ತರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಈ ಬಗ್ಗೆ ಕೂಡಲೇ ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆಗೆ ನಿಯಂತ್ರಣ ಹಾಕಬೇಕು ಅಂತಾ ಆಗ್ರಹಿಸಿದ್ದಾರೆ. ಬಳಿಕ ತಹಸೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ