ತ್ರಿಪುರದಾಲ್ಲಿ ಬಿಜೆಪಿ ಸರ್ಕಾರ ರಚನೆ ಸಾಧ್ಯತೆ

ಅಗರ್ತಾಲಾ: ತ್ರಿಪುರಾದಲ್ಲಿ ಆಡಳಿತಾರೂಢ ಬಿಜೆಪಿ ಸತತ ಎರಡನೇ ಅವಧಿಗೆ ಸರ್ಕಾರ ರಚಿಸುವ ಸಾಧ್ಯತೆಯಿದೆ. ನಾಲ್ಕು ಸ್ಥಾನಗಳನ್ನು ಗೆದ್ದಿದೆ ಮತ್ತು 60 ಸದಸ್ಯ ಬಲದ ವಿಧಾನಸಭೆಯಲ್ಲಿ 29 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈಶಾನ್ಯ ರಾಜ್ಯದ 21 ಸ್ಥಳಗಳಲ್ಲಿ 60 ಕೇಂದ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿದೆ.
ಇತ್ತೀಚಿನ ಲಭ್ಯವಿರುವ ಟ್ರೆಂಡ್ ಮತ್ತು ಫಲಿತಾಂಶಗಳ ಪ್ರಕಟಣೆಗಳ ಪ್ರಕಾರ, ಮೊದಲ ಬಾರಿಗೆ 42 ಸ್ಥಾನಗಳಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬುಡಕಟ್ಟು ಮೂಲದ ತಿಪ್ರಾ ಮೋತಾ ಪಕ್ಷ (ಟಿಎಂಪಿ) 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಮತ್ತು ಸಿಪಿಐ(ಎಂ) 11 ರಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಮೂರು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
ದಕ್ಷಿಣ ತ್ರಿಪುರಾದ ಜೋಲೈಬರಿ ಕ್ಷೇತ್ರದಲ್ಲಿ ಬಿಜೆಪಿ ಮಿತ್ರಪಕ್ಷ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ (ಐಪಿಎಫ್‌ಟಿ) ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಅಮರಪುರ, ಕಮಲಸಾಗರ, ಮೋಹನಪುರ ಮತ್ತು ಸಂತೀರ್ ಬಜಾರ್ ನಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ತ್ರಿಪುರಾ ಮುಖ್ಯಮಂತ್ರಿ ಮತ್ತು ಬಿಜೆಪಿ ಅಭ್ಯರ್ಥಿ ಮಾಣಿಕ್ ಸಹಾ ಟೌನ್ ಬೋರ್ಡೋವಾಲಿ ಕ್ಷೇತ್ರದಲ್ಲಿ, ಉಪಮುಖ್ಯಮಂತ್ರಿ ಜಿಷ್ಣು ದೇವ್ ವರ್ಮಾ ಚರಿಲಂ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.