ತ್ರಿವಿಧ ದಾಸೋಹಿ ಲಿ. ಶಿವಕುಮಾರ ಶ್ರೀಗಳ 116 ನೇ ಜಯಂತಿ: ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜೆ

ತ್ರಿವಿಧ ದಾಸೋಹಿ ಲಿ. ಶಿವಕುಮಾರ ಶ್ರೀಗಳ 116 ನೇ ಜಯಂತಿ: ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜೆ

ತುಮಕೂರು: ಇಂದು ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಜಯಂತಿ ನಡೆಯಲಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು.

ಲಿಂಗೈಕ್ಯ ಶಿವಕುಮಾರ ಶ್ರೀಗಳ 116ನೇ ಜಯಂತಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುವುದು.

ಇಂದು ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಪ್ರತಿಮೆ ಇಟ್ಟು ಮೆರವಣಿಗೆ ನಡೆಸಲಾಗುತ್ತದೆ. ಬೆಳಗ್ಗೆ 11 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು, ಸುತ್ತೂರು ಮಠದ ಶ್ರೀಗಳು ಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್, ಸಭಾಪತಿ ಬಸವರಾಜ ಹೊರಟ್ಟಿ ಭಾಗವಹಿಸಲಿದ್ದಾರೆ.