ದ.ಕ. ಜಿಲ್ಲೆಯ ಮರಳು ಅಡ್ಡೆಗಳಿಗೆ ಲೋಕಾಯುಕ್ತ ದಾಳಿ

ದ.ಕ. ಜಿಲ್ಲೆಯ ಮರಳು ಅಡ್ಡೆಗಳಿಗೆ ಲೋಕಾಯುಕ್ತ ದಾಳಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವಡೆ ಅಕ್ರಮ ಮರಳು ಅಡ್ಡೆಗಳಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಮೂಲ್ಕಿ, ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ. ‌ ಲಾರಿ, ಟಿಪ್ಪರ್‌, ಜೆಸಿಬಿ ಮತ್ತು ಮರಳು ಸಹಿತ 40 ಲಕ್ಷ ‌ರೂ. ಮೌಲ್ಯದ ಸೊತ್ತುಗಳು ವಶಕ್ಕೆ ಪಡೆಯಲಾಗಿದ್ದು, ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸಿ ಮೂರು ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.