ದಂಡ ವಸೂಲಿಗೆ ಮನೆ ಬಾಗಿಲಿಗೆ ಬರಲಿದೆ ವಸೂಲಿ ವಾಹನ: ಪಾಲಿಕೆ ಮತ್ತೊಂದು ನಿರ್ಧಾರ...!

ದಂಡ ವಸೂಲಿಗೆ ಮನೆ ಬಾಗಿಲಿಗೆ ಬರಲಿದೆ ವಸೂಲಿ ವಾಹನ: ಪಾಲಿಕೆ ಮತ್ತೊಂದು ನಿರ್ಧಾರ...!

ಹುಬ್ಬಳ್ಳಿ-ಧಾರವಾಡ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ದಂಡ ವಸೂಲಿಗೆ ನೋಟಿಸ್ ಕಳಿಸುತ್ತಿದ್ದ ಪಾಲಿಕೆ ಈಗ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯಲ್ಲಿ ಗಸ್ತು ವಾಹನಗಳನ್ನು ಬಳಸುವ ರೀತಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ದಂಡ ವಸೂಲಾತಿಗೆ ವಾಹನಗಳನ್ನು ಬಳಕೆ ಮಾಡಲು ಮುಂದಾಗಿದೆ.ಯಲ್ಲಿ ಗಸ್ತು ವಾಹನಗಳನ್ನು ಬಳಕೆ ಮಾಡುವುದು ಗೊತ್ತೇ ಇದೆ. ಅದೇ ರೀತಿಯಲ್ಲಿ ಸಾರ್ವಜನಿಕರಿಂದ ದಂಡ ವಸೂಲಿ ಮಾಡಲು ನಾಲ್ಕು ವಾಹನಗಳನ್ನು ಬಳಕೆ ಮಾಡಿಕೊಳ್ಳಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ.

ಹೌದು.. ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಈಗಾಗಲೇ ತ್ಯಾಜ್ಯ ನಿರ್ವಹಣೆಗಾಗಿ ಆಟೋ ಟಿಪ್ಪರ್ ಹಾಗೂ ಧೂಳು ಮುಕ್ತ ಮಾಡಲು ವ್ಯಾಕ್ಯೂಮ್ ಕ್ಲೀನರ್ ಸೌಲಭ್ಯವನ್ನು ತರಲಾಗಿದೆ. ಅದೇ ರೀತಿಯಲ್ಲಿ, ಇದೀಗ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ದಂಡ ವಸೂಲಿಗೂ ವಾಹನಗಳನ್ನು ಬಿಡುವ ಯೋಜನೆಗೆ ಮುಂದಾಗಿದೆ. ವಾಹನಗಳ ಖರೀದಿಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಹಂತದಲ್ಲಿದ್ದು, ಸರ್ಕಾರದಿಂದ ಒಪ್ಪಿಗೆ ದೊರೆತ ಮೇಲೆ ಪಾಲಿಕೆಯು ಟೆಂಡರ್‌ ಕರೆಯಲಿದೆ ಎಂದು ಹೇಳಲಾಗುತ್ತಿದೆ.ನಗರ ಸ್ವಚ್ಛತೆಗೆ ಸಂಬಂಧಿಸಿದಂತೆ ವಿವಿಧ ಸ್ವರೂಪದ ದಂಡ ವಸೂಲಿಗಾಗಿಯೇ 4 ವಾಹನಗಳನ್ನು ಖರೀದಿಸಲು ನಿರ್ಧರಿಸಲಾಗಿದ್ದು, ಈ ಕುರಿತಂತೆ ಶೀಘ್ರದಲ್ಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. 3 ವಾಹನಗಳು ಹುಬ್ಬಳ್ಳಿ ಹಾಗೂ 1 ವಾಹನ ಧಾರವಾಡದಲ್ಲಿ ಕಾರ್ಯಾಚರಿಸಲಿದೆ. ಕೆಲವೊಂದಿಷ್ಟು ವಿಶೇಷ ಪ್ರಕರಣಗಳಲ್ಲಿ ದಂಡ ವಸೂಲಿ ಮಾಡಲು ಅವಕಾಶವಿದೆ. ಈ ವಾಹನವು ಅತ್ಯಾಧುನಿಕ ಕ್ಯಾಮರಾ, ಜಿಪಿಎಸ್‌ ಸೌಲಭ್ಯ ಹೊಂದಿರಲಿದ್ದು, ಪಾಲಿಕೆಯ ನಿಯಂತ್ರಣ ಕೊಠಡಿಗೆ ಸಂಪರ್ಕ ಹೊಂದಿರಲಿದೆ. ಘನತ್ಯಾಜ್ಯ ನಿರ್ವಹಣೆ-ಬೈಲಾ ಉಲ್ಲಂಘನೆಯಡಿ ದಂಡ ವಸೂಲಿ ಮಾಡಲು ಈ ವಾಹನ ಬಳಕೆಯಾಗಲಿದೆ ಎಂದು ತಿಳಿದುಬಂದಿದೆ.