ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ: ಕನ್ನಡಿಗ ಕೆ.ಎಲ್.ರಾಹುಲ್ಗೆ ಭಾರತ ತಂಡದ ಉಪನಾಯಕ ಪಟ್ಟ

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ 3 ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾದ ಕ್ರಿಕೆಟ್ ಆಟಗಾರ, ಕನ್ನಡಿಗ ಕೆ.ಎಲ್. ರಾಹುಲ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೊರಡುವ ಮುನ್ನ ಟೆಸ್ಟ್ ತಂಡದಲ್ಲಿ ಅಜಿಂಕ್ಯ ರಹಾನೆ ಅವರನ್ನು ಉಪನಾಯಕ ಸ್ಥಾನದಿಂದ ಕೆಳಗಿಳಿಸಿ ರೋಹಿತ್ ಶರ್ಮಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.