ದತ್ತಜಯಂತಿ ಹಿನ್ನೆಲೆ; ಶಾಸಕ ಸಿ.ಟಿ.ರವಿ ಮನೆ ಮನೆಗೆ ತೆರಳಿ ಭಿಕ್ಷಾಟನೆ

ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆ ಜಿಲ್ಲೆಯ ನಾರಾಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯ ಮನೆ ಮನೆಗೆ ತೆರಳಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ ಮಾಡುತ್ತಿದ್ದಾರೆ. ಪಡಿ ಸಂಗ್ರಹಕ್ಕೆ ಮನೆಗೆ ಬಂದ ದತ್ತಮಾಲಾಧಾರಿಗಳಿಗೆ ಸಾರ್ವಜನಿಕರು ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ-ಬೆಲ್ಲ ನೀಡಿ ಸ್ವಾಗತಿಸಿದರು. ಪಡಿ ಸಂಗ್ರಹಿಸಿದ ದತ್ತಮಾಲಾಧಾರಿಗಳು ಇರುಮುಡಿ ರೂಪದಲ್ಲಿ ಅದನ್ನ ದತ್ತಪೀಠಕ್ಕೆ ಕೊಂಡೊಯ್ದು ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ಮಾಡಲಿದ್ದಾರೆ.