ದತ್ತಪೀಠಕ್ಕೆ ಹೋಗುವ ಮಾರ್ಗದಲ್ಲಿ ಮೊಳೆ ಹಾಕಿದ ಕೇಸ್ : ಇಬ್ಬರು ಆರೋಪಿಗಳು ಅರೆಸ್ಟ್

ದತ್ತಪೀಠಕ್ಕೆ ಹೋಗುವ ಮಾರ್ಗದಲ್ಲಿ ಮೊಳೆ ಹಾಕಿದ ಕೇಸ್ : ಇಬ್ಬರು ಆರೋಪಿಗಳು ಅರೆಸ್ಟ್

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ವೇಳೆ ರಸ್ತೆಯಲ್ಲಿ ಮೊಳೆ ಹಾಕಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಡಿಸೆಂಬರ್ 6,7 ಮತ್ತು 8 ರಂದು ದತ್ತಜಯಂತಿ ನಡೆದಿತ್ತು. ಈ ವೇಳೆ ಕಿಡಿಗೇಡಿಗಳು ದತ್ತಜಯಂತಿಗೆ ಹೋಗುವ ಮಾರ್ಗದಲ್ಲಿ ಮೊಳೆಗಳನ್ನು ಚೆಲ್ಲಿದ್ದರು. ಪ್ರಕರಣ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೊಹಮ್ಮದ್ ಶಹಬಾಸ್ ಹಾಗೂ ವಾಹೀದ್ ಹುಸೇನ್ ಬಂಧಿತ ಆರೋಪಿಗಳಾಗಿದ್ದು, ಹಾರ್ಡ್ ವೇರ್ ಶಾಪ್ ನಲ್ಲಿ 4 ಕೆಜಿ ಮೊಳೆ ಖರೀದಿಸಿದ್ದರು. ದತ್ತಪೀಠಕ್ಕೆ ಹೋಗುವ ರಸ್ತೆಯಲ್ಲಿ ಮೊಳೆ ಚೆಲ್ಲಿದ್ದರು. ಮೊಳೆಗಳಿಂದಾಗಿ ಹಲವು ವಾಹನಗಳು ಪಂಕ್ಚರ್ ಆಗಿದ್ದವು. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.