ದಶಕಗಳ ನಂತರ ಮಾರ್ದನಿಸಿದ ದಲಿತರ ಸಾಂಸ್ಕೃತಿಕ ಪ್ರತಿರೋಧ

ಬೆಂಗಳೂರಿನ ; ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ದಲಿತ ಸಂಘಟನೆಗಳ ಐಕ್ಯತಾ ಸಮಾವೇಶದ ಸಂಪೂರ್ಣ ವರದಿ
ದುರಿತ ಕಾಲದ ಭರವಸೆಯಾಗಿ, ದಲಿತರ ಮೇಲೆ ಹೆಚ್ಚಾಗುತ್ತಿರುವ ದಬ್ಬಾಳಿಕೆಗಳ ಈ ಕಾಲಘಟ್ಟದಲ್ಲಿ ಸಮಸಮಾಜದ ಕನಸು ಕಾಣುತ್ತಿರುವ ದಲಿತರು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಒಗ್ಗಟ್ಟು ಪ್ರದರ್ಶಿಸಿದರು.
ಕರ್ನಾಟಕದ ಸಾಂಸ್ಕೃತಿಕ ಇತಿಹಾಸದಲ್ಲಿ ತನ್ನದೇ ಆದ ಮಹತ್ವವನ್ನು ಪಡೆದಿರುವ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳು ಒಂದು ವೇದಿಕೆಗೆ ಬರುವ ಮೂಲಕ ಶಕ್ತಿ ಪ್ರದರ್ಶನ ಮಾಡಿದವು.
ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಆಯೋಜಿಸಿದ್ದ ‘ದಲಿತರ ಸಾಂಸ್ಕೃತಿಕ ಪ್ರತಿರೋಧ, ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ’ವು ದಲಿತರಲ್ಲಿ ಹೊಸ ಭರವಸೆಗಳನ್ನು ಹುಟ್ಟಿಹಾಕಿತು. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ನಲವತ್ತು ಸಾವಿರಕ್ಕೂ ಹೆಚ್ಚಿನ ದಲಿತರು ಬಿಜೆಪಿ ಸರ್ಕಾರದ ದಲಿತ ವಿರೋಧಿ ನೀತಿಗಳ ವಿರುದ್ಧ ರಣಕಹಳೆ ಮೊಳಗಿಸಿದರು.