ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು; ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ: ಪುನೀತ್ ಹಳೇಯ ಟ್ವೀಟ್ ವೈರಲ್

ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು; ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ: ಪುನೀತ್ ಹಳೇಯ ಟ್ವೀಟ್ ವೈರಲ್
ದಿವಂಗತ ಪುನೀತ್ ಅವರ 'ಗಂಧದ ಗುಡಿ' ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ. ಶುಕ್ರವಾರ (ಅಕ್ಟೋಬರ್ 28) ಈ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದೆ. ಈ ಮಧ್ಯೆ ಪುನೀತ್ ಅವರ ಹಳೆಯ ಟ್ವೀಟ್ ವೈರಲ್ ಆಗಿದೆ. ಬೆಂಗಳೂರು: ದಿವಂಗತ ಪುನೀತ್ ಅವರ 'ಗಂಧದ ಗುಡಿ' ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ.
ಶುಕ್ರವಾರ (ಅಕ್ಟೋಬರ್ 28) ಈ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದೆ. ಈ ಮಧ್ಯೆ ಪುನೀತ್ ಅವರ ಹಳೆಯ ಟ್ವೀಟ್ ವೈರಲ್ ಆಗಿದೆ. ಪುನೀತ್ ರಾಜ್​ಕುಮಾರ್ ಅವರು ಸಾಕಷ್ಟು ಕನಸುಗಳನ್ನು ಕಂಡಿದ್ದ ವ್ಯಕ್ತಿ. ಕೇವಲ ನಟನೆ ಮಾತ್ರವಲ್ಲದೆ ನಿರ್ಮಾಣದಲ್ಲೂ ಬ್ಯುಸಿ ಇದ್ದರು.

ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಪುನೀತ್ ರಾಜ್​ಕುಮಾರ್ ಅವರು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಮಾಡುತ್ತಾರೆ ಎಂಬುದು ಮೊದಲೇ ಚರ್ಚೆಯಲ್ಲಿತ್ತು. ಕಳೆದ ವರ್ಷ ಇದೇ ದಿನ (ಅಕ್ಟೋಬರ್ 27,2021) ಅಪ್ಪು ಈ ಬಗ್ಗೆ ಒಂದು ಅಪ್​ಡೇಟ್ ನೀಡಿದ್ದರು. ‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು.

ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್ ಟ್ವೀಟ್ ಮಾಡಿದ್ದರು. ಇದರಲ್ಲಿ ನವೆಂಬರ್ 1ರಂದು ವಿಶೇಷ ಘೋಷಣೆ ಮಾಡುವ ವಿಚಾರ ತಿಳಿಸಿದ್ದರು. ಈ ಟ್ವೀಟ್ ಮಾಡಿದ ಎರಡೇ ದಿನಕ್ಕೆ ಪುನೀತ್ ಹೃದಯಾಘಾತದಿಂದ ನಿಧನ ಹೊಂದಿದರು.