ದಾರುಣ ಘಟನೆ.. ಮರಳು ತುಂಬಿದ್ದ ಟಿಪ್ಪರ್ ಲಾರಿ ಪಲ್ಟಿ.. ಇಬ್ಬರು ಸಾವು

ಕಲಬುರಗಿ: ಮರಳು ತುಂಬಿದ್ದ ಟಿಪ್ಪರ್ ಲಾರಿಯೊಂದು ಚರಂಡಿಯಲ್ಲಿ ಪಲ್ಟಿಯಾದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಕಲಕಂಬ್ ಬಡಾವಣೆಯಲ್ಲಿ ನಡೆದಿದೆ. ಈ ಘಟನೆಯ ಪರಿಣಾಮ ಟಿಪ್ಪರ್ ಅಡಿಯಲ್ಲಿ ಬಾಲಕ ಸೇರಿ ಇಬ್ಬರು ಸಿಲುಕಿ ಸಾವನ್ನಪ್ಪಿದ್ದಾರೆ.
ಕಳೆದ ರಾತ್ರಿ ಕಲಕಂಬ್ ಬಡಾವಣೆಯಲ್ಲಿ ಈ ದುರ್ಘಟನೆ ನಡೆದಿದೆ.