ದಾವಣಗೆರೆ ಎಐಸಿಸಿ ವೀಕ್ಷಕರಾಗಿ ಪ್ರಣತಿ ಸುಶೀಲ್ ಕುಮಾರ್ ಶಿಂಧೆ ನೇಮಕ

ದಾವಣಗೆರೆ ಎಐಸಿಸಿ ವೀಕ್ಷಕರಾಗಿ ಪ್ರಣತಿ ಸುಶೀಲ್ ಕುಮಾರ್ ಶಿಂಧೆ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ. ಟಿಕೆಟ್ ಹಂಚಿಕೆಯಿಂದ ಹಿಡಿದು ಚುನಾವಣೆ ಗೆಲ್ಲುವವರೆಗೂ ಎಲ್ಲಾ ಪ್ರಕ್ರಿಯೆಗಳಲ್ಲಿ ಪ್ರಣತಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಪ್ರಣತಿ ಸುಶೀಲ್ ಕುಮಾರ್ ಶಿಂಧೆ ಮಹಾರಾಷ್ಟ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದರು. ಪ್ರಣತಿ ಅವರು ಕೇಂದ್ರ ಗೃಹ ಸಚಿವ ಸುಶಿಲ್ ಕುಮಾರ್ ಶಿಂಧೆ ಅವರ ಪುತ್ರಿ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಹೇಳಿದರು.