ದಾವಣಗೆರೆಯಲ್ಲಿ `RTI' ಕಾರ್ಯಕರ್ತನ ಹತ್ಯೆ ಪ್ರಕರಣ : 11 ಜನರ ವಿರುದ್ಧ `FIR' ದಾಖಲು
ದಾವಣಗೆರೆ : ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಆರ್ ಟಿ ಐ ಕಾರ್ಯಕರ್ತ ಜಿ.ಪಿ.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಿಂತೆ ಪೊಲೀಸರು 11 ಜನರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ಜಿ.ಪಿ.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಪಿಡಿಓ ಎ.ಟಿ.ನಾಗರಾಜ್ ಸೇರಿ 11 ಜನರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ಆರ್ ಟಿಐ ಕಾರ್ಯಕರ್ತ ಜಿ.ಪಿ.ರಾಮಕೃಷ್ಣ ಅವರನ್ನು ಜನವರಿ 7 ರಂದು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು.