ದಾವಣಗೆರೆಯಲ್ಲಿ ಬೈಕ್ ಗೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

ದಾವಣಗೆರೆಯಲ್ಲಿ ಬೈಕ್ ಗೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

ದಾವಣಗೆರೆ : ಚಲಿಸುತ್ತಿದ್ದ ಬೈಕ್ ಗೆ ಹಿಂದಿನಿಂದ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಮಾದಾಪುರ ಕ್ರಾಸ್ ನಲ್ಲಿ ನಡೆದಿದೆ.

ಮೃತರನ್ನು ಮೋಹನ್ ನಾಯ್ಕ್ (30) ಪೂರ್ಯಾ ನಾಯ್ಕ್ (25) ಎಂದು ಗುರುತಿಸಲಾಗಿದೆ.

ಘಟನೆ ನಂತರ ಬಸ್ ಚಾಲಕ ಸ್ಥಳದಲ್ಲೇ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಮೃತರು ಶಿವಮೊಗ್ಗದ ವಿನೋಬನಗರ ನಿವಾಸಿಗಳು ಎಂದು ಗುರುತಿಸಲಾಗಿದೆ.