ದಿ ಕಾಶ್ಮೀರ್ ಫೈಲ್ಸ್ ಚಿತ್ರ ಸುಳ್ಳು ಎಂದು ಸಾಬೀತಾದರೆ ನಿವೃತ್ತಿ: ಅಗ್ನಿಹೋತ್ರಿ
ದಿ ಕಾಶ್ಮೀರ್ ಫೈಲ್ಸ್ ಚಿತ್ರ ಸತ್ಯಕ್ಕೆ ದೂರಾವಾಗಿದ್ದು ಎಂದು ಯಾರಾದರೂ ಸಾಬೀತು ಪಡಿಸಿದರೆ ನಾನು ಸಿನಿಮಾ ಮಾಡುವುದನ್ನೇ ನಿಲ್ಲಿಸುತ್ತೇನೆ‘ ಎಂದು ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ.‘ದಿ ಕಾಶ್ಮೀರ್ ಫೈಲ್ಸ್ ಚಿತ್ರವು ಅಸಭ್ಯ, ಕೀಳು ಅಭಿರುಚಿಯ ಚಿತ್ರ. ಪ್ರಚಾರದ ಉದ್ದೇಶದ ಈ ಚಿತ್ರವು ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸ್ಪರ್ಧಿಸಲು ಸೂಕ್ತವಾದುದಲ್ಲ’ ಎಂದು ಐಎಫ್ಎಫ್ಐ ಅಂತರರಾಷ್ಟ್ರೀಯ ಸ್ಪರ್ಧೆ ವಿಭಾಗದ ತೀರ್ಪುಗಾರರಾದ ನಾಡವ್ ಲ್ಯಾಪಿಡ್ ಹೇಳಿದ್ದರು