ದಿಢೀರ್ ಸುದ್ದಿಗೋಷ್ಠಿ ಕರೆದ ಸಿಎಂ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಮಧ್ಯಾಹ್ನ 1ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಭದ್ರಾಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೋಷಣೆ ಸೇರಿದಂತೆ ಯಾವೆಲ್ಲ ಯೋಜನೆ, ಕೊಡುಗೆಗಳು ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ್ಕೆ ಸಿಕ್ಕಿವೆ ಎಂಬ ಬಗ್ಗೆ ಸಿಎಂ ಬೊಮ್ಮಾಯಿ ಮಾಹಿತಿ ನೀಡಲಿದ್ದು, ಸಿಎಂ ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ ನೆಟ್ಟಿದೆ