ದೀಪಾವಳಿ ಬಳಿಕ ಸಂಪುಟ ಪುನಾರಚನೆ ಬಗ್ಗೆ ಚರ್ಚೆಗೆ ಸಿಎಂ ದಿಲ್ಲಿಗೆ: ಪ್ರಹ್ಲಾದ ಜೋಶಿ
ಬೆಂಗಳೂರು: ದೀಪಾವಳಿಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಬರುವುದಾಗಿ ಹೇಳಿದ್ದಾರೆ. ಅವರು ಅಲ್ಲಿಗೆ ಬಂದ ನಂತರ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಸಂಪುಟ ರಚನೆ ಸೇರಿದಂತೆ ಹಲವು ವಿಚಾರಗಳನ್ನು ವರಿಷ್ಠರ ಜತೆ ಚರ್ಚಿಸುವುದಾಗಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ದೀಪಾವಳಿ ನಂತರ ಮುಖ್ಯಮಂತ್ರಿಗಳು ದೆಹಲಿಗೆ ಬರುವುದಾಗಿ ತಮ್ಮ ಬಳಿ ಹೇಳಿದ್ದಾರೆ. ಅವರು ದೆಹಲಿಗೆ ಬಂದಾಗ ಹಲವು ವಿಚಾರಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಿಗೆ ನಿರುದ್ಯೋಗದ ಭಯ ಕಾಡುತ್ತಿದೆ. ಆ ಹಿನ್ನೆಲೆಯಲ್ಲಿ ಅವರು ಕೇಂದ್ರದ ಬಗ್ಗೆ ಮಾತನಾಡುತ್ತಿದ್ದಾರೆ. ಕೇವಲ ಎರಡು ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿಗೆ ಭಯ ಇಲ್ಲ. ಭಾರತ್ ಜೋಡೋ ಯಾತ್ರೆ ನಂತರ ಗೋವಾದಲ್ಲಿ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ತೋಡೊ ಯಾತ್ರೆ ಶುರುವಾಗಿದೆ. ರಾಹುಲ್ ಗಾಂಧಿ ತಮ್ಮ ಸ್ವಂತ ಬಲದಿಂದ ಮಾತಾನಾಡುತ್ತಿಲ್ಲ. ಯಾರೋ ಬರೆದು ಕೊಟ್ಟಿರುವುದನ್ನು ಮಾತನಾಡುತ್ತಾರೆ ಎಂದು ಟೀಕಿಸಿದರು.ರಾಜ್ಯಗಳಲ್ಲಿ ಕಾಂಗ್ರೆಸ ಅಧಿಕಾರದಲ್ಲಿದ್ದು ಆ ಹಿನ್ನೆಲೆಯಲ್ಲಿ ನಿರುದ್ಯೋಗದ ಆತಂಕದಿಂದಾಗಿ ಕೇಂದ್ರ ಸರ್ಕಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.