ದುಬಾರಿ ಮನೆ ಖರೀದಿಸಿದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಐದಾರು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ರು ಅಗ್ನಿಹೋತ್ರಿಗೆ ಸ್ಟಾರ್ ಪಟ್ಟ ತಂದುಕೊಟ್ಟಿದ್ದು ದಿ ಕಾಶ್ಮೀರ್ ಫೈಲ್ಸ್ ಸಿನಿಮಾ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಮೂಲಕ ರಾತ್ರೋ ರಾತ್ರಿ ಸಖತ್ ಖ್ಯಾತಿ ಘಳಿಸಿದ ವಿವೇಕ್ ಅಗ್ನಿಹೋತ್ರಿ ಇತ್ತೀಚಿನ ದಿನಗಳಲ್ಲಿ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಹೆಚ್ಚು ಸುದ್ದಿಯಾಗ್ತಿದ್ದಾರೆ.
ವಿವೇಕ್ ಅಗ್ನಿಹೋತ್ರಿ ಮತ್ತು ಪಲ್ಲವಿ ಜೋಷಿ ದಂಪತಿ ಮುಂಬೈನ ವೆರ್ಸೋವಾದಲ್ಲಿ ದುಬಾರಿ ಫ್ಲ್ಯಾಟ್ ಖರೀದಿ ಮಾಡಿದ್ದು ಈ ಫ್ಲ್ಯಾಟ್ ಗೆ 17.90 ಕೋಟಿ ಎಂದು ಹೇಳಲಾಗುತ್ತಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಹಿಟ್ ಬಳಿಕ ಈ ಪ್ರಮಾಣದ ದುಬಾರಿ ಫ್ಲ್ಯಾಟ್ ಖರೀದಿ ಮಾಡಿದ್ದಾರೆ ಎನ್ನುವುದು ಚರ್ಚೆಗೆ ಕಾರಣವಾಗಿದೆ.
ಮೂಲಗಳ ಪ್ರಕಾರ ವಿವೇಕ್ ಖರೀದಿಸಿರುವ ಫ್ಲ್ಯಾಟ್ 3258 ಚದರ ಅಡಿ ವಿಸ್ತೀರ್ಣದಲ್ಲಿದೆಯಂತೆ. ಈ ಫ್ಯ್ಲಾಟ್ ನಲ್ಲಿ ಸುಮಾರು ಮೂರು ಕಾರ್ ಪಾರ್ಕಿಂಗ್ ಕೂಡ ಅವಕಾಶ ನೀಡಲಾಗಿದೆ. ಸ್ಟ್ಯಾಂಪ್ ಡ್ಯೂಟಿಗೆಂದೇ 1.07 ಕೋಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂಬೈನ ಎಕ್ಸ್ಟಸಿ ಪ್ರೈವೇಟ್ ಜೋಷಿ ಅನ್ನುವವರಿಂದ ಇದನ್ನು ಖರೀದಿಸಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಬದುಕಿನಲ್ಲಿ ಘಟಿಸುವ ಎಲ್ಲ ವಿಷಯವನ್ನೂ ಸೋಷಿಯಲ್ ಮೀಡಿಯಾದ ಮೂಲಕ ಹಂಚಿಕೊಳ್ಳುವ ವಿವೇಕ್, ಈ ಕುರಿತು ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಮೂಡಿ ಬಂದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬರೋಬ್ಬರಿ 252 ಕೋಟಿ ರೂಪಾಯಿಯನ್ನು ಕಲೆಕ್ಷನ್ ಮಾಡಿತ್ತು. ಕಾಶ್ಮೀರ ಪಂಡಿತರ ಹತ್ಯೆಯನ್ನು ಆಧಾರವಾಗಿ ಇಟ್ಟುಕೊಂಡು ತಯಾರಿಸಲಾದ ಸಿನಿಮಾಗೆ ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳು ತೆರಿಗೆ ವಿನಾಯತಿಯನ್ನು ಘೋಷಿಸಿದ್ದವು.