ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧಿಸಿದ ಸಿಬಿಐ

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧಿಸಿದ ಸಿಬಿಐ

ಹೊಸದಿಲ್ಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ದಿನವಿಡೀ ವಿಚಾರಣೆಯ ನಂತರ ಭಾನುವಾರ ಬಂಧಿಸಿದೆ. ಸಿಸೋಡಿಯಾ ಅವರ ವಿಚಾರಣೆ ಬೆಳಗ್ಗೆ 11.10ರ ಸುಮಾರಿಗೆ ಆರಂಭವಾಯಿತು.

ಮೂಲಗಳ ಪ್ರಕಾರ, ಗೋವಾ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಪಡೆದ ಕಿಕ್‌ಬ್ಯಾಕ್‌ಗಳ ಬಗ್ಗೆ ಅವರನ್ನು ಕೇಳಲಾಯಿತು. ಪ್ರಕರಣದಲ್ಲಿ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದ್ದು, ಶೀಘ್ರದಲ್ಲೇ ಮೊದಲ ಪೂರಕ ಚಾರ್ಜ್ ಶೀಟ್ ಸಲ್ಲಿಸಲಿದೆ.