ದೆಹಲಿ ಮಹಾನಗರ ಪಾಲಿಕೆ ಮತದಾನ ಆರಂಭ

ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್ಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 8ರಿಂದ ಸಂಜೆ 5.30ರವರೆಗೆ ಮತದಾನ ನಡೆಯಲಿದ್ದು ಈಗಾಗಲೇ ಅನೇಕರು ತಮ್ಮ ಮತ ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಮತದಾನ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. 40,000 ಪೊಲೀಸರು, 20 ಸಾವಿರ ಹೋಮ್ಗಾರ್ಡ್ಸ್, 108 ಕಂಪನಿಗಳ ಅರೆಸೇನಾಪಡೆ, ಸಶಸ್ತ್ರ ಮೀಸಲು ಪಡೆ ನಿಯೋಜನೆ ಮಾಡಲಾಗಿದೆ. ಹಾಗೂ ಡ್ರೋನ್ ಮೂಲಕ ಕಣ್ಗಾವಲು ಇರಿಸಲಾಗಿದೆ.