ದೆಹಲಿ ಯುವತಿಯ ಸಾವಿನ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಬೇಸರ

ದೆಹಲಿ ಯುವತಿಯ ಸಾವಿನ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಬೇಸರ

ದೆಹಲಿಯಲ್ಲಿ ಭಾನುವಾರ 20 ವರ್ಷದ ಯುವತಿಯೊಬ್ಬಳ ಸ್ಕೂಟಿ ಕಾರಿಗೆ ಡಿಕ್ಕಿ ಹೊಡೆದಿತ್ತು. ಆಕೆಯ ಬಟ್ಟೆ ಕಾರಿಗೆ ಸಿಕ್ಕಿ ಆಕೆಯನ್ನು ಕಾರು 4 ಕಿ.ಮೀವರೆಗೂ ಎಳೆದುಕೊಂಡು ಹೋಗಿತ್ತು. ಈ ಘಟನೆಯಲ್ಲಿ ತೀವ್ರವಾಗಿ ಆ ಯುವತಿ ಮೃತಪಟ್ಟಿದ್ದಳು. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ 'ಹೊಸ ವರ್ಷದಂದು ದೆಹಲಿಯಲ್ಲಿ ನಡೆದ ಈ ದುರಂತದಿಂದ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ' ದೆಹಲಿಯ ಪೊಲೀಸ್ ಆಯುಕ್ತರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದಿದ್ದಾರೆ.