ದೆಹಲಿಗೆ ಬರುವಂತೆ ಬುಲಾವ್ : ಸುರ್ಜೆವಾಲಾ ಭೇಟಿಯಾದ ಶಾಸಕ ಜಮೀರ್

ಬೆಂಗಳೂರು: ಚಾಮರಾಜಪೇಟೆ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಇದೀಗ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲರನ್ನು ಭೇಟಿಯಾಗಿದ್ದಾರೆ.
ಜಮೀರ್ ಅಹ್ಮದ್ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು.
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಜಮೀರ್ ಅಹ್ಮದ್ ಗೆ ದೆಹಲಿಗೆ ಬರುವಂತೆ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಇಂದು ದೆಹಲಿಗೆ ತೆರಳಿದ್ದಾರೆ.