ದೆಹಲಿಯ ಓಖ್ಲಾದಲ್ಲಿರುವ ಕಾರ್ಖಾನೆಯಲ್ಲಿ ಅಗ್ನಿ ಅವಘಡ : ಸ್ಥಳಕ್ಕೆ 16 ಅಗ್ನಿಶಾಮಕ ವಾಹನಗಳು ದೌಡು

ದೆಹಲಿಯ ಓಖ್ಲಾದಲ್ಲಿರುವ ಕಾರ್ಖಾನೆಯಲ್ಲಿ ಅಗ್ನಿ ಅವಘಡ : ಸ್ಥಳಕ್ಕೆ 16 ಅಗ್ನಿಶಾಮಕ ವಾಹನಗಳು ದೌಡು

ವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಓಖ್ಲಾ 1 ನೇ ಹಂತದ ಕಾರ್ಖಾನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.

ಪ್ರಾಥಮಿಕ ಮಾಹಿತಿಯಂತೆ ಮಧ್ಯಾಹ್ನ 12:30ರ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸ್ಥಳಕ್ಕೆ 16 ಅಗ್ನಿಶಾಮಕ ವಾಹನಗಳು ತೆರಳಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಲ್ಲ, ಕಾರ್ಖಾನೆಯೊಳಗೆ ಯಾರೂ ಸಿಲುಕಿಕೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಘಟನೆಗೆ ಹಿಂದಿನ ಕಾರಣ ಇನ್ನು ತಿಳಿದು ಬಂದಿಲ್ಲ ಎನ್ನಲಾಗುತ್ತಿದೆ.