ದೆಹಲಿಯಲ್ಲಿ ಖರ್ಗೆ ಅಧಿಕಾರ ಸ್ವೀಕಾರ ಸಮಾರಂಭ ; ರಾಹುಲ್ ಗಾಂಧಿಯೂ ಭಾಗಿ

ದೆಹಲಿಯಲ್ಲಿ ಖರ್ಗೆ ಅಧಿಕಾರ ಸ್ವೀಕಾರ ಸಮಾರಂಭ ; ರಾಹುಲ್ ಗಾಂಧಿಯೂ ಭಾಗಿ

ವದೆಹಲಿ : ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಅಕ್ಟೋಬರ್ 26 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಸಮಾರಂಭದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದು, ಪಕ್ಷದ ”ಭಾರತ್ ಜೋಡೋ” ಯಾತ್ರೆ ಆರಂಭವಾದ ನಂತರ ರಾಹುಲ್ ಗಾಂಧಿ ಅವರು ಇದೇ ಮೊದಲ ಬಾರಿ ದೆಹಲಿಗೆ ಮರಳುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಆ ದಿನದ ಸಮಾರಂಭದಲ್ಲಿ ಖರ್ಗೆ ಅವರು ಹುದ್ದೆಗೆ ಆಯ್ಕೆಯಾದ ಪ್ರಮಾಣಪತ್ರವನ್ನು ಸಹ ಅವರಿಗೆ ನೀಡಲಾಗುವುದು ಮತ್ತು ಅಂದಿನಿಂದ ಅವರು ತಮ್ಮ ಹೊಸ ಪಾತ್ರವನ್ನು ವಹಿಸಿಕೊಳ್ಳಲಿದ್ದಾರೆ.

80 ರ ಹರೆಯದ ಖರ್ಗೆ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಎಐಸಿಸಿ ಪ್ರಧಾನ ಕಚೇರಿ, 24 ಅಕ್ಬರ್ ರಸ್ತೆ, ನವದೆಹಲಿಯಲ್ಲಿ ಬೆಳಗ್ಗೆ 10.30 ಕ್ಕೆ ಸಮಾರಂಭ ನಡೆಯಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.