ದೇವರಿಗೆ ಹಚ್ಚಿಟ್ಟಿದ್ದ ದೀಪದಿಂದ ಮನೆಗೆ ಬೆಂಕಿ; ಒಂದೂವರೆ ವರ್ಷದ ಮಗು ಸಜೀವ ದಹನ

ದೇವರಿಗೆ ಹಚ್ಚಿಟ್ಟಿದ್ದ ದೀಪದಿಂದ ಮನೆಗೆ ಬೆಂಕಿ; ಒಂದೂವರೆ ವರ್ಷದ ಮಗು ಸಜೀವ ದಹನ

ಗುರುಗ್ರಾಮ: ಘಾಟಾ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೂವರೆ ವರ್ಷದ ಮಗು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಹರಿಜನ ಕಾಲೋನಿಯಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮಗುವನ್ನು ಮನೋಜ್ ಎಂದು ಗುರುತಿಸಲಾಗಿದೆ.

ರಾಜಸ್ಥಾನದ ಭರತ್‌ಪುರ ಮೂಲದ ಸತೀಶ್‌ ಕುಮಾರ್‌ ಎಂಬುವವರ ಬಾಡಿಗೆ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸತೀಶ್‌ ಕುಮಾರ್ ಅವರ ಪತ್ನಿ ಮನೋಜ್‌ನನ್ನು ಒಳಗೆ ಬಿಟ್ಟು, ಹೊರಗಿನಿಂದ ಮನೆಗೆ ಬೀಗ ಹಾಕಿಕೊಂಡು ತನ್ನ ಇನ್ನೊಬ್ಬ ಮಗನನ್ನು ಶಾಲೆಯಿಂದ ಕರೆದುಕೊಂಡು ಬರಲು ಹೋದರು. ಈ ವೇಳೆ ಮನೆಯೊಳಗೆ ದೇವರಿಗೆ ಹಚ್ಚಿಟ್ಟಿದ್ದ ದೀಪವು ಮನೋಜ್ ಆಟವಾಡುತ್ತಿದ್ದ ಹಾಸಿಗೆಯ ಮೇಲೆ ಇದ್ದಕ್ಕಿದ್ದಂತೆ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಇಡೀ ಮನೆಗೆ ಆವರಿಸಿದೆ.

ಮಾಹಿತಿ ಪಡೆದ ನಂತರ ಅಗ್ನಿಶಾಮಕ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಮಗುವನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಆದ್ರೆ, ಅಲ್ಲಿ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ