ದೇವೇಗೌಡರ ಮಾನಸ ಪುತ್ರ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿ

ಈಗಾಗಲೇ ಜೆಡಿಎಸ್ ತೊರೆದಿರುವ ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮಾನಸಪುತ್ರ ವೈ.ಎಸ್.ವಿ.ದತ್ತಾ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜ.15ರಂದು ದತ್ತಾ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ. ಐವತ್ತು ವರ್ಷಗಳಿಂದ ಮಾಜಿ ಪ್ರಧಾನಿ ದೇವೇಗೌಡರು-ನನ್ನದು ತಂದೆ ಮಕ್ಕಳ ಸಂಬಂಧ. ಆದರೆ ಈಗ ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ದತ್ತಾ ಹೇಳಿದರು.