ದೇಶ ಹಾಗೂ ರಾಜ್ಯದಲ್ಲಿ ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ : ಬಿ.ವೈ. ವಿಜಯೇಂದ್ರ ಹೇಳಿಕೆ

ತುಮಕೂರು : ದೇಶ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಯಾವತ್ತೂ ಅಧಿಕಾರಕ್ಕೆ ಬರಲ್ಲ, ಅಧಿಕಾರಕ್ಕೆ ಬರ್ತೀವಿ ಅಂತಾ ಕಾಂಗ್ರೆಸ್ ನವರು ಹಗಲು ಕನಸು ಕಾಣುತ್ತಿದ್ದಾರೆ ಎಂದು ಬಿ.ವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಹಾಗೂ ರಾಜ್ಯದಲ್ಲಿ ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಹೇಗಾದ್ರೂ ಮಾಡಿ ಅಧಿಕಾರಕ್ಕೆ ಬರಬೇಕೆಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಲೂಟಿ ಹೊಡೆಯಲು ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇನ್ನು ಜೆಡಿಎಸ್ ಯಾವತ್ತೂ ಬಹುಮತದ ಬಗ್ಗೆ ಯೋಚನೆ ಮಾಡುವುದಿಲ್ಲ. ಜೆಡಿಎಸ್ ನವರು 30 ಸ್ಥಾನ ಗೆಲ್ಲುವ ಬಗ್ಗೆಯಷ್ಟೇ ಯೋಚಿಸುತ್ತಾರೆ ಎಂದು ಹೇಳಿದ್ದಾರೆ.